ಜೆಡಿಎಸ್ ಪಕ್ಷದ ಹಾನಗಲ್ ವಿಧಾನಸಭಾ ಕ್ಷೇತ್ರದ 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆ
ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಹಾನಗಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆಯನ್ನು ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಹಾನಗಲ್ ತಾಲೂಕ ಜೆಡಿಎಸ್ ಪಕ್ಷದ ಅಧ್ಯಕ್ಷರು . 2023 ಸಾರ್ವತ್ರಿಕ ಚುನಾವಣೆಯ ಪ್ರಬಲ ಆಕಾಂಕ್ಷಿ ಅಭ್ಯರ್ಥಿ ಜೆಡಿಎಸ್ ನ ರಾಮನಗೌಡ.ಬಸನಗೌಡ. ಪಾಟೀಲ್ ಇವರ ನೇತೃತ್ವದಲ್ಲಿ ನಡೆಯಿತು. ಇಂದಿನ ಈ ಸಭೆಯಲ್ಲಿ ಮುಖ್ಯವಾಗಿ ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾ ಯೋಜನೆ ಮತ್ತು 2023 ಸಾರ್ವತ್ರಿಕ ಚುನಾವಣೆಯ ಪ್ರಣಾಳಿಕೆಯ ಪಂಚ ರತ್ನ ಯೋಜನೆಗಳ ಕುರಿತು ಚರ್ಚಿಸಲಾಯಿತು. ಮತ್ತು ಮುಂದಿನ ದಿನಮಾನಗಳಲ್ಲಿ ಪ್ರತಿ ಹಳ್ಳಿಯಲ್ಲಿ ಇರುವಂತಹ. ಸ್ತ್ರೀಶಕ್ತಿ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳ. ಸನ್ಮಾನ್ಯ ಶ ಎಚ್ ಡಿ ಕುಮಾರಸ್ವಾಮಿ ಅವರ 2023ರ ಜೆಡಿಎಸ್ ಸರಕಾರದ ಸಾಲ ಮನ್ನಾ ಯೋಜನೆಯ ಕುರಿತು ಚರ್ಚಿಸಲಾಯಿತು. ಮತ್ತು ಪಂಚರತ್ನ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪುವಂತೆ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗುವಂತೆ ಸಲಹೆ ಸೂಚನೆಗಳನ್ನು ನೀಡಲಾಯಿತು.