ಕುಂದಗೋಳ
ಕುಂದಗೋಳ ಮತಕ್ಷೇತ್ರದ ಅರಳಿಕಟ್ಟಿ ಗ್ರಾಮದ ಆಶ್ರಯ ಪ್ಲಾಟಿನಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ PRED ಅಡಿ 6 ಲಕ್ಷ ರೂಪಾಯಿ ಮಂಜೂರಾಗಿದ್ದು ಇಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.
ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಅನುಕೂಲವಾಗಲು ಜಿಲ್ಲಾ ವಿಕಲಚೇತನ ಇಲಾಖೆಯಿಂದ ಎರಡು ವೀಲ್ ಚೇರ್ ಗಳನ್ನು ಆಸ್ಪತ್ರೆಯ ವೈದ್ಯರಿಗೆ ಇಂದು ಹಸ್ತಾಂತರಿಸಿದರು. ತದನಂತರ ಗ್ರಾಮಸ್ಥರು ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಕಾರಣಿಭೂತರಾದ ಮತದಾರ ಪ್ರಭುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.