Spread the loveಹುಬ್ಬಳ್ಳಿ : ಡಾ.ಬಾಬಾ ಸಾಹೇಬ ಭೀಮರಾವ್ ಅಂಬೇಡ್ಕರ್ ಪುಣ್ಯತಿಥಿಯ ಅಂಗವಾಗಿ ಹುಬ್ಬಳ್ಳಿ ತಾಲೂಕು ಆಡಳಿತ ಭವನದ 2ನೇ ಮಹಡಿ ಸಭಾಂಗಣದಲ್ಲಿ 65ನೇ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ತಾ.ಪಂ.ಇಓ ಗಂಗಾಧರ ಕಂದೂಕರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ನಂದಾ ಹಣಬರಟ್ಟಿ , ವಾರ್ಡನ್ ಡಾ.ಪ್ರಹ್ಲಾದ್‌ಗೆಜ್ಜಿ, ಸೇರಿದಂತೆ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.
Read More »ಇಹಲೋಕ ತ್ಯಜಿಸಿದ ಹಿರಿಯನಟ ಎಸ್.ಶಿವರಾಂ
Spread the loveಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ . ಅವರಿಗೆ 84 ವರ್ಷ ವಯಸ್ಸಾಗಿತ್ತು . ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು . ಇತ್ತೀಚೆಗೆ ಅವರಿಗೆ ಅಪಘಾತವಾಗಿ , ತಲೆಗೆ ಪೆಟ್ಟು ಬಿದ್ದಿತ್ತು ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ .
Read More »ಸತತ ನಾಲ್ಕು ಗಂಟೆ ಶಸ್ತ್ರ ಚಿಕಿತ್ಸೆ ಬಾಲಕ ಈಗ ಸಂಪೂರ್ಣವಾಗಿ ಗುಣಮುಖ : ಡಾ.ರಾಹುಲ್ ಮುಂಗೇಕರ್
Spread the loveಹುಬ್ಬಳ್ಳಿ : ೯ ವರ್ಷದ ಬಾಲಕನಿಗೆ ಎಲುಬಿನಲ್ಲಿ ಕ್ಯಾನ್ಸರ್ ಗಡ್ಡೆ ಕಾಣಿಸಿಕೊಂಡಿತ್ತು, ವಿವೇಕಾನಂದ ಜನರಲ್ ಆಸ್ಪತ್ರೆಯಲ್ಲಿ ವಿಶೇಷ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಡಾ.ರಾಹುಲ್ ಮುಂಗೇಕರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ತಿಂಗಳಿನಿಂದ ಎಡಗೈನ ಬುಜ ಭಾಗದ ಎಲುಬಿನಲ್ಲಿ ಬಾವು ಮತ್ತು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಕಾನ್ಸರ್ ಇರುವುದು ದೃಢಪಟ್ಟಿದೆ. ಕ್ಯಾನ್ಸರ್ ಪ್ರಮಾಣ ತೀವ್ರವಾಗಿತ್ತು, ನಾಲ್ಕು ಹಂತದಲ್ಲಿ ಮೂರು ತಿಂಗಳುಗಳ ಕಾಲ …
Read More »ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ : ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರ ಗಾಯ
Spread the loveಹುಬ್ಬಳ್ಳಿ : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಕೂಡಲೇ ಗಾಯಗೊಂಡವರನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಧ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು …
Read More »