Spread the loveಹುಬ್ಬಳ್ಳಿ : ಮಹಿಳೆ ಅಬಲೆಯಲ್ಲ ಸಬಲೆ ಎಂಬುವುದನ್ನು ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೂಡ ಸಾಬೀತು ಪಡಿಸುತ್ತಾ ಬಂದಿದ್ದಾಳೆ. ಮಹಿಳೆಯರ ಕಾರ್ಯಕ್ಷಮತೆಆ29 ಹಾಗೂ ಕಾರ್ಯದಕ್ಷತೆಯನ್ನು ಪರಿಚಯಿಸುವ ಸದುದ್ದೇಶದಿಂದ ನೈಋತ್ಯ ರೈಲ್ವೆ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಿಂದ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಲಾಯಿತು. ಮಹಿಳೆಯರ ಸಾಮರ್ಥ್ಯವನ್ನು ಪ್ರದರ್ಶಿಸುವ ನಿದರ್ಶನಕ್ಕೆ ಈ ಮಹಿಳಾ ದಿನಾಚರಣೆ ಸಾಕ್ಷಿಯಾಗಿತು. ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ರೈಲ್ವೆ …
Read More »ಉಕ್ರೇನ್‌ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಚೈತ್ರಾ ಸಂಶಿ
Spread the loveಉಕ್ರೇನ್‌ನಿಂದ ಸುರಕ್ಷಿತವಾಗಿ ವಾಪಸಾದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿ,ಶುಭ ಹಾರೈಸಿದರು.
Read More »ಆಕರ್ಷಕ ಎ.ಪಿ.ಎಂ.ಸಿ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಉದ್ಘಾಟನೆ
Spread the loveಹುಬ್ಬಳ್ಳಿ: ಅಮರಗೋಳದ ಜಗಜ್ಯೋತಿ ಬಸವೇಶ್ವರ ಎ.ಪಿ.ಎಂ.ಸಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಘಟಕವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಏಷ್ಯಾದ ಅತಿದೊಡ್ಡ ಎ.ಪಿ.ಎಂ.ಸಿ ಎಂಬ ಖ್ಯಾತಿ ಹೊಂದಿರುವ ಹುಬ್ಬಳ್ಳಿ ಎ.ಪಿ.ಎಂ.ಸಿ ಗೆ ಸಾಮಾಜಿಕ ಸುಧಾರಕ ಜಗಜ್ಯೋತಿ ಬಸವೇಶ್ವರ ಹೆಸರಿಡಲಾಗಿದೆ. ಇದಕ್ಕೆ ತಕ್ಕಹಾಗೆ ಮುಖ್ಯದ್ವಾರವನ್ನು ನಿರ್ಮಿಸಲಾಗಿದ್ದು, ಉತ್ತರ ಕರ್ನಾಟಕದ ರೈತ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ಬಸವಣ್ಣ, ನೇಗಿಲು ಹೊತ್ತ ರೈತ, …
Read More »ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಸ್ವಾಮೀಜಿ ಅವರಿಂದ ಗ್ರೋಯಿಂಗ್ ಬಡ್ಸ್ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ
Spread the loveಹುಬ್ಬಳ್ಳಿ: ಮುತ್ತಮ್ಮ ಎಜ್ಯುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಗ್ರೋಯಿಂಗ್ ಬಡ್ಸ್ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಭೂಮಿಪೂಜಾ ಕಾರ್ಯಕ್ರಮವನ್ನು ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಸ್ವಾಮೀಜಿ ಅವರು ನೆರೆವೇರಿಸಿದರು. ಹುಬ್ಬಳ್ಳಿ ನಗರದ ಕುಸುಗಲ್ ಗ್ರಾಮ ಬಳಿಯ ಮಹಾದುರ್ಗಾ ಕಾಲೋನಿಯಲ್ಲಿ ಜರುಗಿತು . ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರಿನ ಡಾ. ವೀರಸೋಮೇಶ್ವರ ರಾಜದೇಶಿಕೆಂದ್ರ ಶಿವಾಚಾರ್ಯ ಭಗವತ್ಪಾದರು, ಸಾನಿಧ್ಯ ಸುಳ್ಳ ಗ್ರಾಮದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯ …
Read More »
Hubli News Latest Kannada News