Home / Top News / ಧಾರವಾಡದ ನುಗ್ಗಿಕೇರಿ ಬಳಿ ಭೀಕರ ರಸ್ತೆ ಅಪಘಾತ, ಮಹಿಳೆ ಸ್ಥಳದಲ್ಲೇ ಸಾವು

ಧಾರವಾಡದ ನುಗ್ಗಿಕೇರಿ ಬಳಿ ಭೀಕರ ರಸ್ತೆ ಅಪಘಾತ, ಮಹಿಳೆ ಸ್ಥಳದಲ್ಲೇ ಸಾವು

Spread the love

ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಧಾರವಾಡದ ನುಗ್ಗಿಕೇರಿ ಬಳಿ ನಡೆದಿದೆ.
ಕಾರು ಮತ್ತು ಸ್ಕೂಟಿ ನಡುವೆ ನಡೆದ ಈ ಭೀಕರ ಡಿಕ್ಕಿಯ ರಭಸಕ್ಕೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಜಮಾಯಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು? ಮೃತ ಮಹಿಳೆಯ ಗುರುತು ಹಾಗೂ ಘಟನೆಯ ಸಂಪೂರ್ಣ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಸಂಬಂಧಪಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದೆ.

About Editor 2

Check Also

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ

Spread the loveಬೆಂಗಳೂರು-ಮೈಸೂರು ರಸ್ತೆಯ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಲಾರಿ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ …

Leave a Reply

Your email address will not be published. Required fields are marked *

[the_ad id="389"]