ಕುಂದಗೋಳ
ಕುಂದಗೋಳ ಮತಕ್ಷೇತ್ರದ ನೂಲ್ವಿ ಗ್ರಾಮದಲ್ಲಿ 2021 – 22 ನೇ ಸಾಲಿನ ಪೂರಕ ಅಂದಾಜು ಯೋಜನೆ ಅಡಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಶಾಸಕರಾದ ಶ್ರೀ ಎಮ್ ಆರ್ ಪಾಟೀಲ್ ಉದ್ಘಾಟನೆ ಮಾಡಿದರು.
ತದನಂತರ ಸ್ಥಳೀಯ ಗ್ರಾಮಸ್ಥರು ಅಹವಾಲುಗಳನ್ನು ಆಲಿಸಿ ಅಗತ್ಯ ಮತ್ತು ಸೂಕ್ತ ಕ್ರಮ ಕೈಗೊಂಡು ಬಗೆಹರಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನೂಲ್ವಿ ಗ್ರಾಮದಲ್ಲಿ ಹದಗೆಟ್ಟ ರಸ್ತೆಗಳನ್ನು ವೀಕ್ಷಣೆ ಮಾಡಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಶೀಘ್ರದಲ್ಲಿ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಅನುಕೂಲ ಮಾಡಿಕೊಡುವಂತೆ ಸೂಚನೆ ನೀಡಿ, ಪ್ಲಾಟಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಗೊಂಡಿದ್ದು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಆಗುತ್ತಿರುವ ತೊಂದರೆಯನ್ನು ಮನಗಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಹೇಳಿ ಶೀಘ್ರದಲ್ಲಿ ಈ ಕಟ್ಟಡವನ್ನು ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮದ ಹಿರಿಯರು ಮತ್ತು ಪಕ್ಷದ ಮುಖಂಡರು ಜೊತೆಗಿದ್ದರು.