ಹುಬ್ಬಳ್ಳಿಯಲ್ಲಿ ಯುವಕನನ್ನು ಕೊಲೆ ಮಾಡಿ ಪರಾರಿಯಾದ ಆರೋಪಿಗಳು
ಹುಬ್ಬಳ್ಳಿ : ಯುವಕನನ್ನ ಕೊಲೆ ಮಾಡಿ ಆರೋಪಿಗಳು ಪರಾರಿಯಾದ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ನಡೆದಿದೆ.
ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ(24) ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ. ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ್ ಭೇಟಿ ಪರಿಶೀಲನೆ ನಡೆಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.