ಕುಂದಗೋಳ
ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದರಿಂದ ಕುಂದಗೋಳ ತಾಲೂಕನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದಾರೆ. ಆದರೆ ಇದು ಕೇವಲ ಘೋಷಣೆಗೆ ಅಷ್ಟೇ ಸೀಮಿತವಾಗಿದೆ ಇದುವರೆಗೂ ಯಾವುದೇ ರೀತಿಯ ಪರಿಹಾರ ನೀಡಿರುವುದಿಲ್ಲ ಶೀಘ್ರದಲ್ಲೇ ಪರಿಹಾರ ನೀಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
ಹೌದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಈ ಹಿಂದೆ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಇಲ್ಲಿವರೆಗೂ ಯಾವುದೇ ಪರಿಹಾರ ಬಂದಿಲ್ಲ ಹಾಗೂ ರೈತರಿಗೆ ಯಾವುದೇ ಬೆಳೆವಿಮಾ ಮೊತ್ತವನ್ನು ಬಿಡುಗಡೆ ಮಾಡಿರುವುದಿಲ್ಲ. ಕೂಡಲೆ ರೈತರಿಗೆ ಪರಿಹಾರದ ಹಣವನ್ನು ಬಿಡುಗಡೆ ಮಾಡಬೇಕು ಇಲ್ಲವಾದರೆ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ್ ಅಶೋಕ ಶಿಗ್ಗಾಂವಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.