Home / Top News / ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

Spread the love

ಧಾರವಾಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ.


ಧಾರವಾಡದಿಂದ ಅಳ್ಳಾವರಕ್ಕೆ  ತೆರಳಿದ್ದ ಇಬ್ಬರು ಯುವಕರು, ವಾಪಸ್ ಬರುವಾಗ ಮುಂದೆ ಚಲಿಸುತ್ತಿದ್ದ ಕಾರಿಗೆ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ ಹೊಡೆದಿದ್ದಾರೆ.
ಅಪಘಾತದ ರಭಸಕ್ಕೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಶಿವಳ್ಳಿ ಗ್ರಾಮದ ಓರ್ವ ಯುವಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಗಾಯಗೊಂಡ ಮತ್ತೋರ್ವ ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

About Editor 2

Check Also

ಆಕಸ್ಮಿಕ ಬೆಂಕಿಗೆ 4 ಬಣವೆಗಳು ಭಸ್ಮ : ಸಂಕಷ್ಟಕ್ಕೆ ಸಿಲುಕಿದ ರೈತರು

Spread the loveಹುಬ್ಬಳ್ಳಿ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ನಾಲ್ಕು ಹೊಟ್ಟಿನ ಬಣವೆಗಳು ಸಂಪೂರ್ಣ ಸುಟ್ಟು …

Leave a Reply

Your email address will not be published. Required fields are marked *

[the_ad id="389"]