Home / Top News / ಹುಬ್ಬಳ್ಳಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಹುಬ್ಬಳ್ಳಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮನೆ ಮೇಲೆ ಲೋಕಾಯುಕ್ತ ದಾಳಿ

Spread the love

ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಸಾರಿಗೆ ಸಂಸ್ಥೆಯ ಕಂಡಕ್ಟರ್ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿ ನಗರ ಡಿಪೋದಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಷಡಕ್ಷರಯ್ಯ ಅತ್ತಿಕಟ್ಟಿಮಠ ಎಂಬುವವರ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಷಡಕ್ಷರಯ್ಯ ಅವರು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ 20×30 ಅಳತೆಯ ಮನೆ ಸೇರಿದಂತೆ ಒಟ್ಟು ಮೂರು ಮನೆಗಳನ್ನು ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಮೇರೆಗೆ ಮೂರು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಆಸ್ತಿಪಾಸ್ತಿ ಹಾಗೂ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ದಾಳಿಯ ವೇಳೆ ಯಾವೆಲ್ಲ ಆಸ್ತಿಗಳು ಪತ್ತೆಯಾಗಿವೆ ಎಂಬುದು ಲೋಕಾಯುಕ್ತ ತನಿಖೆಯ ಬಳಿಕ ತಿಳಿದುಬರಬೇಕಿದೆ.

About Editor 2

Check Also

ಹುಬ್ಬಳ್ಳಿಯಲ್ಲಿ ಮಹಿಳಾ ಗಾಂಜಾ ಪೆಡ್ಲರ್‌ ಬಂಧನ್

Spread the loveಹುಬ್ಬಳ್ಳಿಯ ಮಿಲ್ಲತ್ ನಗರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ 45 ವರ್ಷದ ಬಸೀರಾ ಹಸನ್ ಶೇಖ್ ಎಂಬ …

Leave a Reply

Your email address will not be published. Required fields are marked *

[the_ad id="389"]