Home / Top News / ಹುಬ್ಬಳ್ಳಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಂತಾರಾಜ್ಯ ಡ್ರಗ್ಸ್ ಜಾಲ ಪತ್ತೆ

ಹುಬ್ಬಳ್ಳಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಂತಾರಾಜ್ಯ ಡ್ರಗ್ಸ್ ಜಾಲ ಪತ್ತೆ

Spread the love

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಎಂಡಿಎಂಎ (MDMA) ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಅಂತಾರಾಜ್ಯ ಪೆಡ್ಲರ್‌ಗಳ ಹೆಡೆಮುರಿ ಕಟ್ಟುವಲ್ಲಿ ಗೋಕುಲ ರೋಡ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ…

ಹುಬ್ಬಳ್ಳಿಯ ಉದ್ಯಮ ನಗರದ ಬಳಿ ಅಕ್ರಮವಾಗಿ ಎಂಡಿಎಂಎ (MDMA) ಮಾದಕ ವಸ್ತುವಿನ ಮಾತ್ರೆಗಳನ್ನು ಮಾರಾಟ ಹಾಗೂ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ನವೆಂಬರ್ 20ರಂದು ರಾತ್ರಿ 9:30ರ ಸುಮಾರಿಗೆ ಗೋಕುಲ ರೋಡ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ ನೇತೃತ್ವದ ತಂಡ ದಾಳಿ ನಡೆಸಿದೆ.

ದಾಳಿಯ ವೇಳೆ ತಮಿಳುನಾಡಿನ ಕೊಯಂಬತ್ತೂರು ಮೂಲದ 24 ವರ್ಷದ ರಘುಕೃಷ್ಣನ್ ಅಲಿಯಾಸ್ ಕುಳ್ಳಿ, 21 ವರ್ಷದ ರಾಜಕುಮಾರ್ ಹಾಗೂ ಹಳೆ ಹುಬ್ಬಳ್ಳಿಯ ಅರವಿಂದ ನಗರದ ನಿವಾಸಿ ಪ್ರವೀಣ ಶೆಟ್ಟಿ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಬರೋಬ್ಬರಿ 1 ಕೆ.ಜಿ. 300 ಗ್ರಾಂ ತೂಕದ ಎಂಡಿಎಂಎ ಮಾದಕ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ.

ಬಂಧಿತ ಆರೋಪಿಗಳ ಪೈಕಿ ರಘುಕೃಷ್ಣನ್ ವಿರುದ್ಧ ತಮಿಳುನಾಡಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ 4 ಪ್ರಕರಣಗಳು ದಾಖಲಾಗಿದ್ದರೆ, ಪ್ರವೀಣ ಶೆಟ್ಟಿ ವಿರುದ್ಧ ತಮಿಳುನಾಡಿನ ಕರುಂಬಕಡೈ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ. ಸದ್ಯ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇನ್ನು ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಇನ್‌ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ, ಪಿಎಸ್‌ಐ ಸಚಿನ್‌ಕುಮಾರ್ ದಾಸರೆಡ್ಡಿ ಹಾಗೂ ಸಿಬ್ಬಂದಿಗಳಾದ ಲಕ್ಷ್ಮಣ ನಾಯಕ ಮತ್ತು ಸಂತೋಷ ಅಡೂರ ಅವರ ಕಾರ್ಯವೈಖರಿಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದು, ತಂಡಕ್ಕೆ ನಗದು ಬಹುಮಾನವನ್ನು ಘೋಷಿಸಿದ್ದಾರೆ.

ಒಟ್ಟಿನಲ್ಲಿ, ಹೊರರಾಜ್ಯದಿಂದ ಬಂದು ಹುಬ್ಬಳ್ಳಿಯಲ್ಲಿ ಡ್ರಗ್ಸ್ ದಂಧೆ ನಡೆಸಲು ಯತ್ನಿಸುತ್ತಿದ್ದ ಖದೀಮರನ್ನು ಪೊಲೀಸರು ಜೈಲಿಗಟ್ಟಿದ್ದು, ಈ ಜಾಲದ ಹಿಂದೆ ಇನ್ನೂ ಯಾರೆಲ್ಲಾ ಇದ್ದಾರೆ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

About Editor 2

Check Also

ಹುಬ್ಬಳ್ಳಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮನೆ ಮೇಲೆ ಲೋಕಾಯುಕ್ತ ದಾಳಿ

Spread the loveಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಸಾರಿಗೆ ಸಂಸ್ಥೆಯ ಕಂಡಕ್ಟರ್ ಮನೆಗಳ ಮೇಲೆ …

Leave a Reply

Your email address will not be published. Required fields are marked *

[the_ad id="389"]