ಹುಬ್ಬಳ್ಳಿ: ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ನಂಬರ್ 16 ಶಾಲೆಯ ಶಿಕ್ಷಕರಾದ ಶ್ರೀಮತಿ.ಶಾಲಿನಿಸುಧಾ. ಸಿಂಧೆ ಅವರಿಗೆ ರೋಟರಿ ಕ್ಲಬ್ ವತಿಯಿಂದ “ರೋಟರಿ ನೇಶನ್ ಬಿಲ್ಡರ್ ಅವಾರ್ಡ್” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಶ್ರೀಮತಿ.ಶಾಲಿನಿಸುಧಾ .ಸಿಂಧೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿ ಸ್ನೇಹಿ ಶಿಕ್ಷಕರಾಗಿರುವ ಇವರನ್ನು ಹಲವಾರು ಪ್ರಶಸ್ತಿಗಳು ಅರಸಿ ಬಂದಿವೆ. ಮಾರ್ಗದರ್ಶನ ನೀಡುವದರ ಮೂಲಕ ಹಲವರ ಸಾಧನೆಗೆ ಕಾರಣೀಭೂತರಾಗಿದ್ದಾರೆ.
