ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮತದಾನ ಜರುಗಿತು . ಒಟ್ಟು 8,18,096 ಮತದಾರರ ಪೈಕಿ 4,40,251 ಮತದಾರರು ಮತ ಚಲಾಯಿಸಿದ್ದು , ಶೇ 53.81 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಕೆ . ಪಾಟೀಲ ಅವರು ತಿಳಿಸಿದ್ದಾರೆ .