ಧಾರವಾಡ್ : ಹುಬ್ಬಳ್ಳಿ -ಧಾರವಾಡ ಸಾರ್ವರ್ತಿಕ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಹಾಗೂ ಬಹಿರಂಗ ಪ್ರಚಾರಕ್ಕೆ ರಾಜ್ಯ ಚುನಾವಣಾ ಆಯೋಗವು ಇಂದು ಮಾರ್ಗಸೂಚಿಗಳನ್ನು ನೀಡಿ ಆದೇಶ ಹೊರಡಿಸಿದೆ ಅಭ್ಯರ್ಥಿಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ .
ಈ ಕುರಿತು ಪ್ರಕಟಣೆ ನೀಡಿರುವ ಅವರು ರಾಜ್ಯ ಚುನಾವಣಾ ಆಯೋಗವು ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುವ ಕುರಿತು ಭಾರತ ಸಂವಿಧಾನ ಪರಿಚ್ಛೇದ 243 ಝಡ್ ಎ ರನ್ವಯ ಕೆಲವು ನಿರ್ದೇಶನಗಳನ್ನು ನೀಡಿ ಆದೇಶಿಸಿದೆ.
1 ) ಅಭ್ಯರ್ಥಿಯು ಸೇರಿ ಗರಿಷ್ಟ 5 ಜನ ಬೆಂಬಲಿಗರೊಂದಿಗೆ Face Mask ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸಬಹುದು .
2 ) ಪ್ರಚಾರಕ್ಕೆ ಯಾವುದೇ ವಾಹನಗಳನ್ನು ಬಳಸುವುದನ್ನು ಹಾಗೂ ಗುಂಪು ಗುಂಪಾಗಿ ಪ್ರಚಾರ ಮಾಡುವುದನ್ನು ನಿಷೇಧಿಸಿದೆ .
3 ) ಅಭ್ಯರ್ಥಿಗಳು ಪ್ರಚಾರದ ಸಂದರ್ಭದಲ್ಲಿ Face Mask ಅನ್ನು ಕಡ್ಡಾಯವಾಗಿ ಧರಿಸತಕ್ಕದ್ದು .
4 ) ಇಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಚಾರ ಕೈಗೊಳ್ಳಬಹುದು ಅವುಗಳ ವೆಚ್ಚದ ವಿವರಗಳನ್ನು ಸಲ್ಲಿಸತಕ್ಕದ್ದು .
5 ) ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು ಈ ಸಮಯದಲ್ಲಿ ಕಡ್ಡಾಯವಾಗಿ Face Mask ಮತ್ತು ಕೈ ಗವಸು ಧರಿಸಬೇಕು .
ಸೂಚನೆಗಳನ್ನು ಪಾಲಿಸುತ್ತಾ ಪ್ರಚಾರವನ್ನು ಕೈಗೊಳ್ಳುವಂತೆ ರಾಜ್ಯ ಚುನಾವಣೆ ಆಯೋಗ ಆದೇಶ ಹೊರಡಿಸಿದೆ.