ಹುಬ್ಬಳ್ಳಿ : ವಿಶ್ವ ಪರಿಸರ ದಿನಾಚರಣೆಯನ್ನು ನಗರದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಹುಬ್ಬಳ್ಳಿ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಜೂನ್ 09 ನೇ ತಾರೀಖಿನಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪರಿಸರ ದಿನಾಚರಣೆ ನಿಮಿತ್ಯ ಕಾಲೇಜು ಆವರಣದಲ್ಲಿ 100 ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಂಸ್ಥೆಯ ಪ್ರಾಂಶುಪಾಲರು ಡಾ. ಪ್ರಶಾಂತ್ ಬಣಕಾರ್ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ವಿದ್ಯಾರ್ಥಿಗಳಿಗಾಗಿ ಪರಿಸರ ಕಾಳಜಿ ಮೂಡಿಸಲು ಪೋಸ್ಟರ್ ಮೇಕಿಂಗ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಪ್ರೊ. ನವೀನ ಬಿ ಎಸ್ ಮಾತನಾಡಿ ಪರಿಸರದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಸಂಚಾಲಕರಾದ ಪ್ರೊ ಸುನಿಲ ಉಮಚಗಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು. ಸಮಾರಂಭದಲ್ಲಿ ಎಲ್ಲ ವಿಭಾಗದ ಮುಖ್ಯಸ್ಥರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.