ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ವಿವಿಧ ವಾರ್ಡ್ಗಳಿಂದ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದ 16 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಿ ಹು-ಧಾ ಮಹಾನಗರ ಜಿಲ್ಲಾ ಅಧ್ಯಕ್ಷ ಅರವಿಂದ ಬೆಲ್ಲದ ಆದೇಶ ಹೊರಡಿಸಿದ್ದಾರೆ.

ಉಚ್ಛಾಟನೆಗೊಂಡಿರುವ ಎಲ್ಲರೂ ಮುಂದಿನ 6 ವರ್ಷದವರೆಗೆ ಪಕ್ಷದಲ್ಲಿ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಅಲ್ಲದೇ, ಬಿಜೆಪಿ ಬ್ಯಾನರ್‌ನಡಿ ಯಾವುದೇ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
ಬಂಡಾಯವೆದಿದ್ದ ಅಭ್ಯರ್ಥಿಗಳನ್ನು ಮನವೊಲಿಸಿ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸಲು ಬಿಜೆಪಿ ಪಕ್ಷದ ನಾಯಕರು ಸಾಕಷ್ಟು ಪ್ರಯತ್ನಿಸಿದರೂ, ಬಂಡಾಯ ಅಭ್ಯರ್ಥಿಗಳು ಜಪ್ಪಯ್ಯ ಎನ್ನದಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಉಚ್ಛಾಟನೆ ಅಸ್ತ್ರ ಪ್ರಯೋಗಿಸಿದೆ.
Hubli News Latest Kannada News