ಹುಬ್ಬಳ್ಳಿ : ಭಾರತೀಯ ಜನತಾ ಪಕ್ಷ ತನ್ನ ಅಧಿಕಾರದ ಅವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ, ಇಡಿ ಮತ್ತು ಸಿಬಿಐ ದುರ್ಬಳಕೆ ಮಾಡಿಕೊಂಡಿದೆ. ಅಲ್ಲದೇ ಕಾಂಗ್ರೆಸ್ ನಾಯಕರನ್ನು ಹೆದರಿಸಲು ರಾಜಕೀಯ ತಂತ್ರವಾಗಿ ಬಿಜೆಪಿ ಬಳಕೆ ಮಾಡಿಕೊಂಡಿದೆ ಎಂದು ಅವರು ಹೇಳಿದರು.
ಉಪ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಅಭ್ಯರ್ಥಿಗಳು ಸಾಕಷ್ಟು ವಿದ್ಯಾವಂತರಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಆರಿಸಿ ಜನರ ಸೇವೆಗೆ ಬರಲಿದ್ದಾರೆ ಎಂದರು.