ಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಚೌಡೇಶ್ವರಹಾಳ ಗ್ರಾಮದ ದಲಿತ ಮಹಿಳೆಯ ಹತ್ಯೆ ಖಂಡಿಸಿ, ಧಾರವಾಡದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು, ಕಾರ್ಯಕರ್ತರು ದಲಿತ ಮಹಿಳೆ ಹತ್ಯೆ ಮಾಡಿದವರ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಅಕ್ಟೋಬರ್ 4 ರಂದು ಚೌಡೇಶ್ವರಿಹಾಳ ಗ್ರಾಮದ ಗಂಗಪ್ಪ ಎನ್ನುವ ವ್ಯಕ್ತಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಆ ಮಹಿಳೆ ನಿರಾಕರಿಸಿದ್ದು, ಇದರಿಂದ ಕೋಪಗೊಂಡ ವಿಕೃತಿ ಗಂಗಪ್ಪ ತನ್ನ ಬೈಕನಲ್ಲಿನ ಪೆಟ್ರೋಲ್ ತೆಗೆದು ಮಹಿಳೆ ಮೈ ಮೇಲೆ ಎರಚಿ ಬೆಂಕಿ ಹಚ್ಚಿ ಕೊಲೆ ಮಾಡಿ ವಿಕೃತಿ ಮೆರೆದಿದ್ದಾನೆ. ಹಾಗಾಗಿ ದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು, ಈಗ ಗ್ರಾಮೀಣ ಭಾಗದಲ್ಲಿಯು ಹೆಚ್ಚಾಗುತ್ತಿವೆ. ರಾಜ್ಯ ಸೇರಿದಂತೆ ದೇಶದಲ್ಲಿ ದಲಿತ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯುವಲ್ಲಿ ಅಧಿಕಾರಿಗಳು, ಸರ್ಕಾರಗಳು ವಿಫಲವಾಗುತ್ತಿವೆ. ಈಗ ಈ ಪ್ರಕರಣದಲ್ಲಿಯು ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು, ಗೃಹ ಸಚಿವರು ಗಮನಹರಿಸಿ ದಲಿತ ಮಹಿಳೆಯ ಹತ್ಯೆಗೆ ಕಾರಣವಾದ ಆರೋಪಿಗಳ ಮೇಲೆ ಕಠಿಣ ಕಾನೂನು ಜಾರಿ ಮಾಡಬೇಕು. ಹತ್ಯೆಯಾದ ದಲಿತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡಿದರು.
ಇತ್ತೀಚೆಗೆ ರಾಜ್ಯದಲ್ಲಿ ಮಹಿಳೆಯರು ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲ್ಲೇ ಸಾಗುತ್ತಿವೆ. ದಲಿತ ಕುಟುಂಬಗಳ ಮೇಲೆಯು ದೌರ್ಜನ್ಯಗಳು ಹೆಚ್ಚಾಗುಲ್ಲೇ ಬರುತ್ತಿವೆ. ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಒಂದರ ಹಿಂದೊಂದು ವರದಿಯಾಗುತ್ತಲ್ಲೇ ಬರುತ್ತಿದ್ದು, ಹಾಗಾಗಿ ರಾಜ್ಯ ಸರ್ಕಾರ ದಲಿತರ ಮಹಿಳೆ ಸೇರಿದಂತೆ ರಾಜ್ಯದ ಮಹಿಳೆಯರ ಮೇಲೆ ಆಗುತ್ತಿರುವ ಅತ್ಯಾಚಾರಗಳನ್ನು ತಡೆಯಬೇಕು. ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಬೇಕು. ಇಲ್ಲವಾದಲ್ಲಿ ಮುಂದೊಂದಿನ ನಮ್ಮ ಹೆಣ್ಮಕ್ಕಳು ಮನೆಯಿಂದ ಹೊರಬಲರಲು ಹಿಂದೇ ಮುಂದೆ ನೋಡಬೇಕಾಗುತ್ತದೆ. ಯಾದಗಿರಿ ಜಿಲ್ಲೆಯ ಸುರುಪುರ ದಲಿತ ಮಹಿಳೆಯ ಹತ್ಯೆಗೆ ಕಾರಣವಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಅಗ್ರಹಿಸಿ, ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಂಮತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.