ಹುಬ್ಬಳ್ಳಿ: ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಪಟ್ಟಣ ಪಂಚಾಯಿತಿ ಸದಸ್ಯರು , ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಮೊದಲ ಪ್ರಾಶಸ್ತದ ಮತವನ್ನು ನನಗೆ ನೀಡಿದ್ದಾರೆ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರು ವಿಶ್ವಾಸ ವ್ಯಕ್ತಪಡಿಸಿದರು ..
ಹುಬ್ಬಳ್ಳಿಯಲ್ಲಿಂದು ಮತದಾನ ಮಾಡಿದ ನಂತರ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಐದು ಸಾವಿರ ಮೊದಲ ಪ್ರಾಶಸ್ತ್ಯದ ಮತಗಳು ಬೀಳಲಿವೆ ಎಂದರು .ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿದ್ದು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ .ಪಕ್ಷೇತರ ಅಭ್ಯರ್ಥಿಗಳಿಂದ ನಮಗೆ ಯಾವುದೇ ಪರಿಣಾಮ ಬೀರುವುದಿಲ್ಲ .ಇಲ್ಲಿ ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ .ನಮ್ಮ ಜಿಲ್ಲೆಯಲ್ಲಿ ಜಾತಿ ಆಧಾರದ ಮೇಲೆ ಯಾವುದೇ ಚುನಾವಣೆ ನಡೆಯುವುದಿಲ್ಲ .ಜಾತಿ ಆಧಾರದ ಮೇಲೆ ಇಂದು ಚುನಾವಣೆ ನಡೆದಿಲ್ಲ ಆದ್ದರಿಂದ ನಾನು ಅತಿ ಹೆಚ್ಚು ಮಂತ್ರಗಳಿಂದ ಆಯ್ಕೆಯಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.