ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಸಂದರ್ಭದಲ್ಲಿ ಸೆಪ್ಟಂಬರ್ 2 ರ ಬೆಳಿಗ್ಗೆ 6 ಗಂಟೆಯಿಂದ ಸೆ.4 ರ ಬೆಳಿಗ್ಗೆ 6 ಗಂಟೆಯವರೆಗೆ ಹಾಗೂ ಮತಗಳ ಎಣಿಕೆ ಸಂದರ್ಭದಲ್ಲಿ ಸೆ.5 ರ ಸಂಜೆ 6 ಗಂಟೆಯಿಂದ ಸೆ.6 ರ ರಾತ್ರಿ 10 ಗಂಟೆಯವರೆಗೆ ಮದ್ಯಪಾನ,ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದರು.
ಧಾರವಾಡ ತಾಲೂಕು,ಹುಬ್ಬಳ್ಳಿ ನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ತಾಲೂಕುಗಳಲ್ಲಿನ ಭಾರತೀಯ ತಯಾರಿಕೆಯ ಮದ್ಯದ ಅಂಗಡಿಗಳು,ಬಿಯರ್ ಬಾರ್‌ಗಳು,ಕ್ಲಬ್‌ಗಳು ಮದ್ಯದ ಡಿಪೋಗಳನ್ನು ಮುಚ್ಚತಕ್ಕದ್ದು ಮತ್ತು ಲೈಸೆನ್ಸ್‌ದಾರರು ಯಾವುದೇ ಪರಿಹಾರಕ್ಕೆ ಅರ್ಹರಾಗುವುದಿಲ್ಲ.ಅಬಕಾರಿ ಇಲಾಖೆಯ ಅಧಿಕಾರಿಗಳು ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.