ಹುಬ್ಬಳ್ಳಿ : ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ಬಂದು ಮಾರಾಟ ಮಾಡಲು ಸಾಗಿಸುತ್ತಿದ್ದ ಐವರನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಳೇ ಮಂಟೂರು ರೋಡ ಐವರು ಎಲ್ಲಿಂದಲೋ ಮೊಬೈನ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ಆಟೋದಲ್ಲಿ ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬೆಂಡಿಗೇರಿ ಠಾಣೆ ಇನ್ಸ್ ಪೆಕ್ಟರ್ ಶಾಂರಾಜ್ ಸಜ್ಜನ್ ನೇತೃತ್ವದ ತಂಡ ಐವರನ್ನು ವಶಕ್ಕೆ ಪಡೆದು 1 ಲಕ್ಣ 80 ಸಾವಿರ ಮೌಲ್ಯದ 14 ಮೊಬೈಲ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಆಟೋ ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಜಾಹಿರಾತು…


Hubli News Latest Kannada News