Home / Uncategorized / ಎಸ್ ಡಿ ಎಂ ನಲ್ಲಿ ಮುಂದುವರೆದ ಕೊರೋನಾ ಆರ್ಭಟ: ಹೊಸದಾಗಿ 77 ಕೋವಿಡ್ ಪ್ರಕರಣಗಳು ಪತ್ತೆ

ಎಸ್ ಡಿ ಎಂ ನಲ್ಲಿ ಮುಂದುವರೆದ ಕೊರೋನಾ ಆರ್ಭಟ: ಹೊಸದಾಗಿ 77 ಕೋವಿಡ್ ಪ್ರಕರಣಗಳು ಪತ್ತೆ

Spread the love

ಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಇಂದು ಮತ್ತೆ 77 ಜನರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಹಾಗೂ ಇಂದು 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಎಲ್ಲರಿಗೂ ಚಿಕಿತ್ಸೆ,ಔಷಧೋಪಚಾರ ನಡೆಯುತ್ತಿದೆ.ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ.

ಇನ್ನೂ 1822 ಜನರ ತಪಾಸಣಾ ವರದಿಗಳು ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

*ಎಲ್ಲರ ಆರೋಗ್ಯ ಸ್ಥಿರ*

ವರದಿಯಾಗಿರುವ 281 ಪ್ರಕರಣಗಳಲ್ಲಿ , ಕೇವಲ 6 ಜನರಲ್ಲಿ ಮಾತ್ರ ರೋಗದ ಸಾಮಾನ್ಯ ಲಕ್ಷಣಗಳಿವೆ(Mild Symptomatic) ಖಾಯಿಲೆ ತೀವ್ರತರವಾಗಿಲ್ಲ. ಉಳಿದ 275 ಜನರಲ್ಲಿ ರೋಗದ ಲಕ್ಷಣಗಳು ಇಲ್ಲ (Asymptomatic) .
ಯಾವುದೇ ಸಾವು ಸಂಭವಿಸಿಲ್ಲ.

 

 

ಜಾಹಿರಾತು…

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]