ಹುಬ್ಬಳ್ಳಿ: ಕೀಲಿ ಹಾಕಿದ ಮನೆಗಳನ್ನೇ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿತನಿಂದ 1,00,000 ರೂ. ಮೌಲ್ಯದ 20 ಗ್ರಾಂ ಚಿನ್ನಾಭರಣ, 68 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ ನಲ್ಲಿ ಜೈ ಹನುಮಾನ್ ನಗರ ಹಾಗೂ ಸೆಪ್ಟೆಂಬರ್‌ನಲ್ಲಿ ಮಲ್ಲೇಶ್ವರ ನಗರದಲ್ಲಿ ಮತ್ತೊಬ್ಬ ಸಹಚರನೊಂದಿಗೆ ಸೇರಿ ಎರಡು ಮನೆಗಳ ಕೀಲಿ ಮುರಿದು ಕಳ್ಳತನ ಮಾಡಿದ್ದ. ಇನ್‌ಸ್ಪೆಕ್ಟರ್ ಅಶೋಕ ಚವ್ಹಾಣ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ.