ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ . ಅವರಿಗೆ 84 ವರ್ಷ ವಯಸ್ಸಾಗಿತ್ತು . ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು . ಇತ್ತೀಚೆಗೆ ಅವರಿಗೆ ಅಪಘಾತವಾಗಿ , ತಲೆಗೆ ಪೆಟ್ಟು ಬಿದ್ದಿತ್ತು ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ .
