ಹುಬ್ಬಳ್ಳಿ : ಡಾ.ಬಾಬಾ ಸಾಹೇಬ ಭೀಮರಾವ್ ಅಂಬೇಡ್ಕರ್ ಪುಣ್ಯತಿಥಿಯ ಅಂಗವಾಗಿ ಹುಬ್ಬಳ್ಳಿ ತಾಲೂಕು ಆಡಳಿತ ಭವನದ 2ನೇ ಮಹಡಿ ಸಭಾಂಗಣದಲ್ಲಿ 65ನೇ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ತಾ.ಪಂ.ಇಓ ಗಂಗಾಧರ ಕಂದೂಕರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ನಂದಾ ಹಣಬರಟ್ಟಿ , ವಾರ್ಡನ್ ಡಾ.ಪ್ರಹ್ಲಾದ್‌ಗೆಜ್ಜಿ, ಸೇರಿದಂತೆ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.
