ಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಕ್ರಮ ಮದ್ಯ ಸಾಗಾಟ ಜೋರಾಗಿ ಸಾಗಿದ್ದು, ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಂತೆ ಇಂದು ನಗರದ ಮಂಟೂರ ರಸ್ತೆಯಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೆರೆಗೆ ವಾಹನ ಸಂಖ್ಯೆ ಕೆಎ.63k.1560(ಹೊಂಡಾ ಡಿಯೋ ದ್ವಿಚಕ್ರ)ದಲ್ಲಿ ಅಕ್ರಮವಾಗಿ 30.24 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ಮಾಡಿದ ವೇಳೆ ಆರೋಪಿ ಪರಾರಿಯಾಗಿದ್ದಾನೆ. ಈ ಕುರಿತು ಆರೋಪಿತ ಹಾಗೂ ವಾಹನದ ಮಾಲೀಕನ ವಿರುದ್ಧ ಅಬಕಾರಿ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕಿ ನೇತ್ರಾ ಉಪ್ಪಾರ ಪ್ರಕರಣ ದಾಖಲಿಸಿದ್ದಾರೆ.
ದಾಳಿಯಲ್ಲಿ ಅಬಕಾರಿ ಇಲಾಖೆಯ ಜಾನ್ ವರ್ಗೀಸ್, ಸಿದ್ದಪ್ಪ ಕಮ್ಮಾರ ಇತರರು ಇದ್ದರು