ಹುಬ್ಬಳ್ಳಿ : ಬೆಳಗಾವಿ ಜಿಲ್ಲೆ ಅನಗೋಳ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಅಪಮಾನ ಮಾಡಿದನ್ನು ಖಂಡಿಸಿ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕರ್ನಾಟಕದ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಎಂಇಎಸ್ ಹಾಗೂ ಶಿವಸೇನಾ ಪಕ್ಷವನ್ನು ಬ್ಯಾನಗೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ಹುಬ್ಬಳ್ಳಿಯ ದುರ್ಗದ ಬೈಲ್ ವೃತದಲ್ಲಿ ಪ್ರತಿಭಟನೆ ನಡೆಸಿ. ಎಂಇಎಸ್ ಹಾಗೂ ಶಿವಸೇನಾ ಪಕ್ಷ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ. ಬೆಳಗಾವಿ ಜಿಲ್ಲೆ ಅನಗೋಡ ಗ್ರಾಮದಲ್ಲಿ ಮಧ್ಯರಾತ್ರಿ ಕರ್ನಾಟಕ ಕನ್ನಡಿಗರ ಸ್ವತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಅಪಮಾನ ಮಾಡಿದ್ದು ಅಕ್ಷಮ್ಯ ಅಪರಾಧ , ರಾಯಣ್ಣನವರ ಪ್ರತಿಮೆ ಹೊಡೆದು ಹಾಕಿ ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಕೊಟ್ಟಂತಾಗಿದೆ . ಸರ್ಕಾರ ಈ ಕೂಡಲೇ ಎಚ್ಚೆತ್ತು ರಾಯಣ್ಣನವರ ಪ್ರತಿಮೆಯನ್ನು ಒಡೆದು ಹಾಕಿದವರ ಬಂಧಿಸಿ ಗೂಂಡಾ ಕಾಯ್ದೆಯಡಿ ಉಗ್ರ ಶಿಕ್ಷೆಯನ್ನು ನೀಡಬೇಕು ಹಾಗೂ ಎಂಇಎಸ್ ಹಾಗೂ ಶಿವಸೇನೆಯನ್ನು ಕರ್ನಾಟಕದಿಂದ ನಿಷೇಧಿಸಿಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.