ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಚಾಕು ಸದ್ದು ಮಾಡಿ ರಕ್ತ ಹರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಗ್ಗೇರಿ ಬಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು.
ಆಶೀಪ್ ಎಂಬಾತನ ಮೇಲೆ ಎರಡು ಜನ ಚಾಕುವಿನಿಂದ ಇರಿದಿದ್ದು,ಕೈ ಹಾಗೂ ಹೊಟ್ಟೆ ಭಾಗಕ್ಕೆ ಮೂರು ಕಡೆ ಚಾಕುವಿನಿಂದ ಇರಿಯಲಾಗಿದ್ದು,ಗಾಯಗೊಂಡ ಆಶೀಪ್ ನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು.
ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದ್ದು,ಪೊಲೀಸರು ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.