ಹುಬ್ಬಳ್ಳಿ : ಪಕ್ಷ ಸಂಘಟನೆ ಹಾಗೂ ಪಕ್ಷದ ಬಲವರ್ಧನೆಗಾಗಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಡಿ. 28, 29 ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದೆ ಎಂದು
ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ 10 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಣಿ ನಡೆದಿತ್ತು.
ಆಗಲೂ ಸಹ ನಡೆದ ಕಾರ್ಯಕ್ರಮ ಬಹಳ ಅದ್ಭುತವಾಗಿ ಆಗಿತ್ತು. ಆದ್ರೆ ಇತ್ತೀಚಿಗೆ ಕೋವಿಡ್ ಕಾರಣದಲ್ಲಿ ಕಾರ್ಯಕಾರಣಿ ಮಾಡಲು ಆಗಲಿಲ್ಲ.
ಮಂಗಳೂರಿನ ನಂತರ ಬೆಳಗಾವಿ, ಶಿವಮೊಗ್ಗ, ದಾವಣಗೆರೆಯಲ್ಲಿ ನಡೆದಿದೆ.
ಇದೀಗ ಹುಬ್ಬಳ್ಳಿಯಲ್ಲೂ ಸಹ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯನ್ನು 28, 29 ರಂದು ರಾಜ್ಯ ಕಾರ್ಯಕಾರಣಿ ನಡೆಸಲಾಗುವದು ಎಂದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,ಸಭೆಯಲ್ಲಿ ಬಿಜೆಪಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ,ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ ಸೇರಿದಂತೆ ಸಿಎಂ ಭಾಗಿಯಾಗಲಿದ್ದಾರೆ. ಕೋವಿಡ್ ನಿಯಮಗಳನ್ನು ಪಾಲಿಸಿ ಸಭೆಯನ್ನು ನಡೆಸಲಾಗುವದು ಎಂದರು.