ಹುಬ್ಬಳ್ಳಿ : ಕರ್ನಾಟಕದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಇದೇ ದಿ. ೩೧ ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಕನ್ನಡಪರ ಹೋರಾಟಗಾರರು ಮಂಜುನಾಥ್ ಲೂತಿಮಠ ತಿಳಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇ ಪದೇ ಕನ್ನಡ ವಿಷಯವನ್ನು ಇಟ್ಟುಕೊಂಡು ಕರ್ನಾಟಕ ನಾಡ ಧ್ವಜವನ್ನು ಸುಟ್ಟು ಹಾಕಿರುವುದು ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಬಸವಣ್ಣನವರು ಹಾಗೂ ಛತ್ರಪತಿ ಶಿವಾಜಿ ಪ್ರತಿಮೆಗೆ ಅಪಮಾನ ಮತ್ತು ಕರ್ನಾಟಕ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಿಸುವುದರ ಜೊತೆಗೆ ಶಿವಸೇನಾ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಎಂಇಎಸ್ ಸಂಘಟನೆ ನಿಷೇಧ ಮಾಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ನಿವಾಸಕ್ಕೆ ಹೋರಾಟದ ಮುಖಾಂತರ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದೇವೇಂದ್ರಪ್ಪ ಇಟಗಿ, ಕುಬೇರ್ ಪವಾರ್, ಈರಪ್ಪ ಎಮ್ಮಿ, ಆನಂದ ದಲಬಂಜನ, ಪ್ರಕಾಶ ನಾಯಕ್, ಮಲ್ಲಿಕಾರ್ಜುನ, ಸೇರಿದಂತೆ ಉಪಸ್ಥಿತರಿದ್ದರು.