ಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದೆ.
ಹೊರ ವಲಯದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವಿಗೀಡಾಗಿ, ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಐದು ಜನರಿದ್ದು, ಅದರಲ್ಲಿದ್ದ ಯುವಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಇನ್ನುಳಿದ ನಾಲ್ವರನ್ನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ. ಕಾರು ಲಕ್ಷ್ಮೀಕಾಂತ ಕಾಟವಾಟೆ ಎನ್ನುವವರ ಹೆಸರಿನಲ್ಲಿದೆ.
ಮೃತ ಯುವಕನನ್ನ ಹುಬ್ಬಳ್ಳಿ ಮಹಾವೀರಗಲ್ಲಿಯ ಗಣೇಶ ಬಂಡಿ ಎಂದು ಗುರುತಿಸಲಾಗಿದ್ದು, ಗಾಯಾಳುಗಳ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.