Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಮೊಬೈಲ್ ರಿಚಾರ್ಜ್, ಡೇಟಾ ಪ್ಯಾಕ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಮೊಬೈಲ್ ರಿಚಾರ್ಜ್, ಡೇಟಾ ಪ್ಯಾಕ್ ದರ ಏರಿಕೆ ಖಂಡಿಸಿ ಪ್ರತಿಭಟನೆ

Spread the love

ಧಾರವಾಡ : ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಧಾರವಾಡ ಜಿಲ್ಲಾ ಸಮಿತಿಯಿಂದ ಇಂದು ಧಾರವಾಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಪ್ರತಿಭಟನಾ ಸಂದರ್ಭದಲ್ಲಿ ಮಾತನಾಡಿದ ಎಐಡಿವೈಓ ಜಿಲ್ಲಾಧ್ಯಕ್ಷರಾದ ಭವಾನಿಶಂಕರ್ ಎಸ್. ಗೌಡ ಅವರು ಮಾತನಾಡಿದ ಅವರು, ಕೋವಿಡನಂತಹ ಪರಿಸ್ಥಿತಿಯಲ್ಲಿ, ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಆದರೆ ತಮ್ಮ ಲಾಭದಾಹಕ್ಕಾಗಿ ಖಾಸಗಿ ಟಿಲಿಕಾಂ ಕಂಪನಿಗಳು ಮೊಬೈಲ್ ರಿಚಾರ್ಜ್ ದರ ಹಾಗೂ ಡಾಟಾ ಪ್ಲಾನ್ ದರಗಳನ್ನು ಒಂದು ವರ್ಷದಲ್ಲಿ ಪ್ರತಿಶತ 100 ರಷ್ಟು ಹೆಚ್ಚಿಸಿವೆ. ಫೋನ್ ಮತ್ತು ಇಂಟರ್ನೆಟ್ ಮೇಲಿನ ಅವಲಂಬನೆಯು ಅಸಾಧಾರಣವಾಗಿ ಹೆಚ್ಚಾಗಿದೆ. ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರು ತಮ್ಮ ಜೀವನ ಮತ್ತು ಜೀವನೋಪಾಯಕ್ಕಾಗಿ ಮೊಬೈಲ್ ಬಳಕೆಯನ್ನು ಅಗಾಧವಾಗಿ ಅವಲಂಬಿಸಿದ್ದಾರೆ. ಆನ್‌ಲೈನ್ ತರಗತಿಗಳು, ಆನ್‌ಲೈನ್ ಅಪ್ಲಿಕೇಶನ್‌ಗಳು, ಆನ್‌ಲೈನ್ ವಹಿವಾಟುಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಎಲ್ಲವುಗಳಿಂದ ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಈ ಪರಿಸ್ಥಿತಿಯಲ್ಲಿ, ಏರ್‌ಟೆಲ್, ಜಿಯೋ, ವೊಡಾಫೋನ್ ಐಡಿಯಾದಂತಹ ಎಲ್ಲಾ ಮೊಬೈಲ್ ಕಂಪನಿಗಳು ನೆಟ್ ಪ್ಯಾಕ್ ಮತ್ತು ರೀಚಾರ್ಜ್ ದರಗಳನ್ನು ಶೇಕಡಾ 20 ರಿಂದ 25% ವರೆಗೆ ಹೆಚ್ಚಿಸಿವೆ, ಇದು ಸಂಪೂರ್ಣವಾಗಿ ಜನವಿರೋಧಿಯಾಗಿದೆ. ಈ ಸಂದರ್ಭದಲ್ಲಿ ಸೇವಾ ಪೂರೈಕೆದಾರರು ಮತ್ತು ಗ್ರಾಹಕರ ನಡುವೆ ತೀರ್ಪುಗಾರರ ಪಾತ್ರವನ್ನು ವಹಿಸಬೇಕಾದ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು (TRAI) ಸಂಪೂರ್ಣವಾಗಿ ಮೌನವಾಗಿರುವುದನ್ನು ನೋಡಿ ನಮಗೆ ಆಘಾತವಾಗಿದೆ. ಈ ಕೂಡಲೇ ಟ್ರಾಯ್ (TRAI) ಮಧ್ಯ ಪ್ರವೇಶಿಸಿ ಖಾಸಗಿ ಟೆಲಿಕಾಂ ಕಂಪನಿಗಳ ಈ ಹಗಲು ದರೋಡೆಯನ್ನು ನಿಲ್ಲಿಸಬೇಕು ಎಂದರು.‌ ಸಾರ್ವಜನಿಕ ಉದ್ಯಮವಾಗಿದ್ದ ಬಿಎಸ್ಎನ್ಎಲ್ ದುರ್ಬಲಗೊಂಡ ನಂತರ, ಖಾಸಗಿ ಮೊಬೈಲ್ ಆಪರೇಟರ್ ಕಂಪನಿಗಳು ದೇಶದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವಾ ಮಾರುಕಟ್ಟೆಯ ಗಣನೀಯ ಭಾಗದ ಮೇಲೆ ತಮ್ಮ ಬಿಗಿಹಿಡಿತ ಸಾಧಿಸಿವೆ. ಆದ್ದರಿಂದ ಈ ಖಾಸಗಿ ಮೊಬೈಲ್ ಕಂಪನಿಗಳು ಭಾರೀ ಲಾಭ ಗಳಿಸಲು ತಮ್ಮ ಮೂಗಿನ ನೇರಕ್ಕೆ ದರಗಳನ್ನು ನಿಗದಿಮಾಡಿ, ಮೊಬೈಲ್ ಬಳಕೆದಾರರು ಅನಿವಾರ್ಯವಾಗಿ ಅಧಿಕ ಹಣ ಪಾವತಿಸುವಂತೆ ಮಾಡಿವೆ. ಖಾಸಗಿ ಮೊಬೈಲ್ ಕಂಪನಿಗಳ ಈ ಕ್ರಮವನ್ನು ನಾವು ವಿರೋಧಿಸುತ್ತೇವೆ. ಹಾಗೂ ಸಾಮಾನ್ಯ ಜನರ ಪರವಾಗಿ ದರಗಳ ಹೆಚ್ಚಳವನ್ನು ಹಿಂಪಡೆಯಬೇಕು” ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಎಐಡಿವೈಓ ಜಿಲ್ಲಾ ಕಾರ್ಯದರ್ಶಿ ರಣಜಿತ್ ದೂಪದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]