Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡದಲ್ಲಿ ಅತ್ಯಾಚಾರಿಗಳ ವಿರುದ್ಧ ಆಕ್ರೋಶ : ರಾಮ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

ಧಾರವಾಡದಲ್ಲಿ ಅತ್ಯಾಚಾರಿಗಳ ವಿರುದ್ಧ ಆಕ್ರೋಶ : ರಾಮ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

Spread the love

ರಾಜ್ಯದಲ್ಲಿ ಹೆಣ್ಮಕ್ಕಳ ಮೇಲೆ ನಡೆಯುತ್ತಿರು ಅತ್ಯಾಚಾರ ಪ್ರಕರಣಗಳ ತಡೆಗೆ ಕಠಿಣ ಕಾನೂನು ಜಾರಿಗೆ ಅಗ್ರಹಿಸಿ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹು-ಧಾ ನಗರಗಳಲ್ಲಿ ಹಿಂದು ದೇವಾಲಯಗಳ ತೆರವು ವಿರೋಧಿಸಿ, ಧಾರವಾಡದಲ್ಲಿ ರಾಮ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ರಾಮ ಸೇನೆಯ ಮುಖಂಡರು ಹಾಗೂ ಕಾರ್ಯಕರ್ತರು, ಅತ್ಯಾಚಾರಿಗಳ ವಿರುದ್ಧ ಹಾಗೂ ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಇತ್ತೀಚೆಗೆ ರಾಜ್ಯದಲ್ಲಿ ಹೆಣ್ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಹೆಣ್ಣು ಮಕ್ಕಳು ಭಯದಲ್ಲಿ ಓಡಾಟ ನಡೆಸುವ ಪರಿಸ್ಥಿತಿ ಬಂದೊದಗಿದೆ‌. ಹಾಗಾಗಿ ಸರ್ಕಾರ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರುವುದು ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಾಗಬೇಕು ಎಂದು ಆಗ್ರಹಿಸಿದರು.

ಸ್ಮಾರ್ಟ್ ಸಿಟಿಯೋಜನೆಯನ್ನು ಮುಂದಿಟ್ಟುಕೊಂಡು ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಹಿಂದೂ ದೇವಾಲಯಗಳನ್ನು ತೆರವು ಮಾಡುತ್ತಾ ಬರಲಾಗುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸಬೇಕು. ಕೇವಲ ಹಿಂದೂ ದೇವಾಲಯಗಳನ್ನು ಅಧಿಕಾರಿಗಳ ವರ್ಗ ತೆರವು ಮಾಡುತ್ತಿರುವ ನಿರ್ಧಾರ ಸರಿಯಲ್ಲ. ಇದಕ್ಕೆ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತವಾರಿ ಸಚಿವರು ಗಮನಹರಿಸಿ ದೇವಾಲಯಗಳ ಉಳಿಸಲು ಮುಂದಾಗಬೇಕು ಎಂದು ಒತ್ತಾಯ ಮಾಡಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]