ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿತ್ತು. ಯುವ ಸಂಘಟನೆಗಳು ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ವಿಶೇಷ ಗೌರವವನ್ನು ಸಲ್ಲಿಸಿದರು.
ಹೌದು..ಇಂದು ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರೈಲ್ವೆ ನಿಲ್ದಾಣದ ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಸ್ವಾಮಿ ವಿವೇಕಾನಂದರ 156ನೇ ಜಯಂತಿಯ ಪ್ರಯುಕ್ತವಾಗಿ ಅಜೇಯ್ ಜೋಶಿ ಅಭಿಮಾನಿ ಬಳಗದಿಂದ ವಿಶೇಷ ಗೌರವ ಸಲ್ಲಿಸಲಾಯಿತು.
ಯುವ ಪೀಳಿಗೆಗೆ ಸಾಕಷ್ಟು ಸಂದೇಶವನ್ನು ನೀಡುವ ಮೂಲಕ ಯುವಶಕ್ತಿಗೆ ಪ್ರೇರಣೆಯಾಗಿರುವ ಸ್ವಾಮಿ ವಿವೇಕಾನಂದರ ಜೀವನದ ಸಂದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ವಿನಂತಿಸದರು.