ಹುಬ್ಬಳ್ಳಿ : ಆರು ತಿಂಗಳಲ್ಲಿ ಅವಳಿ ನಗರದ ಬಡಾವಣೆಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯ ಬೀಳಗಿ ಲೇಔಟ್‌ನಲ್ಲಿ 27 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸುವ ರಸ್ತೆ ಇಕ್ಕೆಲಗಳಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿಗೆ ಚಾಲನೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈಗಾಗಲೇ ಗುಜರಾತ್ ಭವನ,
ವಿಜಯನಗರ, ವಿಶ್ವೇಶ್ವರಯ್ಯ ನಗರದ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಬದಲಾಯಿಸಲಾಗಿದೆ. ಗದಗ, ಕಾರವಾರ, ಬಿಡ್ನಾಳಗಳ ಸಂಪರ್ಕ ಕಲ್ಪಿಸುವ ರಿಂಗ್ ರೋಡ್ ಕಾಮಗಾರಿ ಮುಗಿದಿವೆ. ಹುಬ್ಬಳ್ಳಿ ಧಾರವಾಡ ನಡುವಿನ ಬೈಪಾಸ್ ನ್ನು 6 ಪಥದಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಆರ್ ಟಿಎಸ್ ಬಸ್ ಸಂಚಾರ ಅವಳಿ ನಗರದಲ್ಲಿ ಮಾತ್ರ ಇದೆ. ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡಲು ಪ್ಲೈಓವರ್ ನಿರ್ಮಿಸಲಾಗುತ್ತಿದೆ. ದಿನದ ಇಪ್ಪತ್ನಾಲ್ಕು ಗಂಟೆ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ವೀರಣ್ಣ
ಸವಡಿ, ಸಂತೋಷ ಚವ್ಹಾಣ್, ಮುಖಂಡರಾದ ವಸಂತ ನಾಡಜೋಶಿ, ಸುಧಾಕರ್ ಕಟ್ಟಿಮನಿ ಸೇರಿದಂತೆ ಮತ್ತಿತರರು ಇದ್ದರು.