Home / Top News / ಹಿಜಾಬ್ ವಿವಾದ ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಬಂದರೂ ಸರ್ಕಾರ ತೀರ್ಪನ್ನು ಪಾಲಿಸಬೇಕು : ಸಭಾಪತಿ ಬಸವರಾಜ ಹೊರಟ್ಟಿ

ಹಿಜಾಬ್ ವಿವಾದ ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಬಂದರೂ ಸರ್ಕಾರ ತೀರ್ಪನ್ನು ಪಾಲಿಸಬೇಕು : ಸಭಾಪತಿ ಬಸವರಾಜ ಹೊರಟ್ಟಿ

Spread the love

ಹುಬ್ಬಳ್ಳಿ : ಹಿಜಾಬ್ ವಿವಾದ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಬಂದರೂ ಸರ್ಕಾರ ತೀರ್ಪನ್ನು ಸ್ವಾಗತಿಸಿ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹತ್ತನೇ ತರಗತಿವರೆಗೆ ಈಗಾಗಲೇ ಸಮವಸ್ತ್ರ ಇದ್ದು, ಆದರೆ ಕಾಲೇಜಿಗೆ ಸಮವಸ್ತ್ರ ಇಲ್ಲ. ಹಾಗಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳುವುದು ಎಂಬುದನ್ನು ಕಾದು ನೋಡಬೇಕು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಶಾಲೆಗಳಲ್ಲಿ ಯಾರೂ ಬಣ್ಣದ ಬಟ್ಟೆಗಳನ್ನು ಧರಿಸದಿರುವಂತೆ ಮಧ್ಯಂತರ ಆದೇಶ ನೀಡಿದೆ ಎಂದರು.

ಸಮವಸ್ತ್ರ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ಇರುವ ಕಾರಣ ಇದನ್ನು ಸದನದಲ್ಲಿ ಚರ್ಚೆ ಮಾಡೋಕ್ಕೆ ಬರುವುದಿಲ್ಲ. ನ್ಯಾಯಾಲಯ ತೀರ್ಪು ಕೊಟ್ಟ ನಂತರ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ತಿಳಿಸಿದರು.

ಹಿಜಾಬ್ ವಿವಾದ ಕೆಲವರ ಹಿಡನ್ ಅಜೆಂಡ್ ಆಗಿರಬಹುದು. ಈಗಾಗಲೇ ಹಿಜಾಬ್ ವಿವಾದ ಸೃಷ್ಟಿ ಕೆಲ ವಿದ್ಯಾರ್ಥಿನಿಯರ ಹಿಡನ್ ಅಜೆಂಡಾ ಇತ್ತು ಎಂಬ ಮಾತುಗಳು ಕೇಳಿ ಬರುತ್ತಿವೆ. ಹಾಗಾಗಿ ಆ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ದುಷ್ಟ ಶಕ್ತಿಗಳು ಯಾವಾಗಲೂ ಸಮಾಜದಲ್ಲಿ ಘಾತುಕ ಕೆಲಸಗಳನ್ನೇ ಮಾಡುತ್ತವೆ. ಕೆಲವರಿಗೆ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವುದೇ ಕೆಲಸವಾಗಿ ಬಿಟ್ಟಿದೆ. ಹಾಗಾಗಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸಮಾಜಘಾತುಕರು ಯಾವುದೇ ಜಾತಿ, ಧರ್ಮ ಇರಲಿ ಅಂಥವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಿಜಾಬ್ ವಿವಾದವನ್ನು ಆಡಳಿತ ಮತ್ತು ವಿರೋಧ ಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ದುರ್ದೈವದ ಸಂಗತಿ. ಇದರಿಂದ ಮುಂದೆ ಏನೋ ಅನಾಹುತ ಆಗುತ್ತೆ ಎಂಬುದನ್ನು ಎಲ್ಲ ಪಕ್ಷಗಳು ತಿಳಿಯಬೇಕು. ಈ ಸಂದರ್ಭವನ್ನು ಸಮಾಜಘಾತುಕ ಶಕ್ತಿಗಳು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಹಾಗಾಗಿ ರಾಜ್ಯದ ಮುಖ್ಯಮಂತ್ರಿಗಳು ಎಲ್ಲರ ಜೊತೆಗೆ ಚರ್ಚಿಸಿ ಸೌಹಾರ್ದಯುತ ವಾತಾವರಣ ನಿರ್ಮಾಣ ಮಾಡಬೇಕು. ಅದನ್ನು ಬಿಟ್ಟು ಮತ್ತಷ್ಟು ಬೆಂಕಿ ಹಚ್ಚುವ ಕೆಲಸ ಯಾರೂ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]