ಹುಬ್ಬಳ್ಳಿ : ಕಳೆದ ಮೂರು ದಿನಗಳ ಹಿಂದೆ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಸ್ಪತ್ರೆಗೆಂದು ದಾಖಲಾಗಿದ್ದ 2.5 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದೆ.
ಹುಬ್ಬಳ್ಳಿಯ ಉಣಕಲ್ ನಿವಾಸಿ ಸಂಜೀವ ಹಾಗೂ ಕೀರ್ತಿ ದಂಪತಿಗಳ 2.5 ವರ್ಷದ ಮಗುವಿಗೆ ರಕ್ತನಾಳದ ಸಮಸ್ಯೆ ಇತ್ತು ಹೀಗಾಗಿ ಮಗುವನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಆದ್ರೆ ಇಂದು ಮಗುವು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದು,ಮಗುವಿನ ಸಾವಿಗೆ ಕಾರಣ ವೈಧ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಪೋಷಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ