ಹುಬ್ಬಳ್ಳಿ : ಕುಂದಗೋಳ್ ತಾಲೂಕ ಯರಗುಪ್ಪಿ ಯಲ್ಲಿ ಹಿಂದೂ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀರಾಮ್ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರ ಕೃತ್ಯದಲ್ಲಿ ಇನ್ನು 4 ಜನರು ಪಾಲ್ಗೊಂಡಿದ್ದಾರೆ ಎಂದು ಮೃತ ಲಕ್ಷ್ಮಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಈ ಕುರಿತು ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಮೃತ ಲಕ್ಷ್ಮಿ ಕುಟುಬಕ್ಕೆ 25 ಲಕ್ಷ ಪರಿಹಾರ ಹಾಗೂ ಅವರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪರಿಹಾರ ಧನವನ್ನು ಘೋಷಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಗಂಗಾಧರ್ ಕುಲ್ಕರ್ಣಿ, ಅಣ್ಣಪ್ಪ ದಿವಟಿಗಿ, ಮಂಜು ಕಾಟಕರ್, ಬಸು ದುರ್ಗದ ಹಾಗೂ ಇತರರು ಭಾಗಿಯಾಗಿದ್ದರು.