Home / Top News / ಹುಬ್ಬಳ್ಳಿ-ಧಾರವಾಡಕ್ಕೆ ಬಜೆಟ್ ಕೊಡುಗೆಗಳು : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹುಬ್ಬಳ್ಳಿ-ಧಾರವಾಡಕ್ಕೆ ಬಜೆಟ್ ಕೊಡುಗೆಗಳು : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

Spread the love

ಹುಬ್ಬಳ್ಳಿ-ಧಾರವಾಡಕ್ಕೆ ಬಜೆಟ್ ಕೊಡುಗೆಗಳು

*ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಡಾ.ಎಸ್.ವಿ.ಪಾಟೀಲ ಕೃಷಿ ಸಂಶೋಧನೆ,ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ ಸ್ಥಾಪನೆ.

*ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ.

*ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯ ಸಾಮರ್ಥ್ಯವನ್ನು 50 ಹಾಸಿಗೆಗಳಿಂದ 100 ಹಾಸಿಗೆಗಳಿಗೆ ಹೆಚ್ಚಿಸುವುದು.

*ಮಹಾದಾಯಿ ನ್ಯಾಯಾಧೀಕರಣ ತೀರ್ಪಿನನ್ವಯ ಹಂಚಿಕೆಯಾದ ನೀರಿನ ಬಳಕೆಗೆ ರಾಜ್ಯದ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗಳಿಗೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ಅಗತ್ಯ ತೀರುವಳಿಗಳನ್ನು ಪಡೆಯಲು ಕ್ರಮವಹಿಸಲಾಗುತ್ತಿದೆ.ಈ ಯೋಜನೆಗಳ ಅನುಷ್ಠಾನಕ್ಕೆ ಪ್ರಸಕ್ತ ಸಾಲಿನಲ್ಲಿ 1 ಸಾವಿರ ಕೋಟಿ ರೂ.ಅನುದಾನ ಒದಗಿಸಲಾಗಿದೆ.

*ಉತ್ತರ ಕರ್ನಾಟಕ ಭಾಗದಲ್ಲಿ ಹೈಟೆಕ್ ಚಿಕಿತ್ಸೆ ಸೌಲಭ್ಯ ಒದಗಿಸಲು ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ 250 ಕೋಟಿ ರೂ.

*ಉತ್ತರ ಕರ್ನಾಟಕದ ಬಹುದಿನಗಳ ನಿರೀಕ್ಷೆಯ ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗ ಯೋಜನೆಯನ್ನು 927 ಕೋಟಿ ರೂ.ಅಂದಾಜು ವೆಚ್ಚದಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸಲು ಕ್ರಮ.

*ಹುಬ್ಬಳ್ಳಿಯಲ್ಲಿ ಅತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ,ಮಾನವ ಸಂಪನ್ಮೂಲ ಒದಗಿಸಲು ಕ್ರಮ.

*ಚೆನ್ನೈ-ಬೆಂಗಳೂರು-ಮುAಬಯಿ ಕಯಗಾರಿಕಾ ಕಾರಿಡಾರ್ ವ್ಯಾಪ್ತಿಯಲ್ಲಿ ಧಾರವಾಡ ಸೇರಿ ಐದು ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ.

*ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮದಡಿ ತುಮಕೂರು ಹಾಗೂ ಧಾರವಾಡ ಪ್ರದೇಶಗಳ ಅಧಿಸೂಚನೆ.

*ಸಾಮಾಜಿಕ ಸೇವಾ ವಲಯದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಹುಬ್ಬಳ್ಳಿ ನವನಗರದ ಕರ್ನಾಟಕ ಕ್ಯಾನ್ಸರ್ ಸಂಸ್ಥೆಗೆ ವಿಶೇಷ ನೆರವು.

*ಧಾರವಾಡದಲ್ಲಿ ಕಸೂತಿ ಮೈಕ್ರೋ ಕ್ಲಸ್ಟರ್ ಹಾಗೂ ನವಲಗುಂದದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಜವಳಿ ಪಾರ್ಕ್ ಸ್ಥಾಪನೆ.ಉದೋಗ ಸೃಜನೆಗೆ ಕ್ರಮ.

*ಬೆಂಗಳೂರಿನಾಚೆ ಸ್ಟಾರ್ಟ ಅಪ್‌ಗಳ ಉತ್ತೇಜನಕ್ಕೆ ಮೈಸೂರು,ಮಂಗಳೂರು ಹಾಗೂ ಹುಬ್ಬಳ್ಳಿಯ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಕ್ಲಸ್ಟರ್‌ಗೆ 12 ಕೋಟಿ ರೂ.ಅನುದಾನ.

*ಪರಿಶಿಷ್ಠ ಜಾತಿ,ಪರಿಶಿಷ್ಠ ಪಂಗಡ,ಹಿಂದುಳಿದ ವರ್ಗ,ಅಲ್ಪಸಂಖ್ಯಾತರರು ಹಾಗೂ ಇತರೆ ವರ್ಗಗಳ ಮಕ್ಕಳಲ್ಲಿ ಉನ್ನತ ವಿದ್ಯಾಭ್ಯಾಸ ಪ್ರೋತ್ಸಾಹಿಸಲು ಧಾರವಾಡ ಸೇರಿ ಐದು ನಗರಗಳಲ್ಲಿ “ದೀನದಯಾಳ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ”ಗಳ ಸ್ಥಾಪನೆಗೆ 250 ಕೋಟಿ ರೂ.

*ಹುಬ್ಬಳ್ಳಿ-ಧಾರವಾಡ ಹಾಗೂ ಇತರೆ ಐದು ನಗರಗಳಲ್ಲಿ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳ ಸ್ಥಾಪನೆ.

*ಧಾರವಾಡ ಎಫ್.ಎಂ.ಸಿ.ಜಿ.ಕ್ಲಸ್ಟರ್ ಸ್ಥಾಪನೆ,ವಿಶೇಷ ಪ್ರೋತ್ಸಾಹಕ ಪ್ಯಾಕೇಜ್.

* ನೋಡಿ ಕಲಿ ಮಾಡಿ ತಿಳಿ ಪರಿಕಲ್ಪನೆಯಡಿ ವಿಜ್ಞಾನ ತತ್ವಗಳನ್ನು ಅರ್ಥ ಮಾಡಿಕೊಳ್ಳಲು ರಾಜ್ಯದ 169 ಬಾಲಕಿಯರ ಪ್ರೌಢಶಾಲೆಗಳಿಗೆ ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರದಿAದ ಲ್ಯಾಬ್ ಇನ್ ಎ ಕಿಟ್‌ಗಳ ಪೂರೈಕೆ.

About Santosh Naregal

Check Also

ಶ್ರೀ ವಿಶಾಲ ಅಬ್ಬಯ್ಯ ಅವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]