ಧಾರವಾಡ : ಅಪರಿಚಿತ ವ್ಯಕ್ತಿನೊಬ್ಬನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಧಾರವಾಡದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಎರಡಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಗೆ ಸುಮಾರು 30 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ವ್ಯಕ್ತಿ ರೈಲಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ವ್ಯಕ್ತಿಯ ತಲೆ ಭಾಗ ತುಂಡಾಗಿ ಬಿದ್ದಿದೆ.
ವ್ಯಕ್ತಿ ಇಂದು ಮಧ್ಯಾಹ್ನ ಇಲ್ಲಿಗೆ ಬಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ. ಸ್ಥಳಿಯರು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯಕ್ಕೆ ಮೃತ ವ್ಯಕ್ತಿ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ. ಆತ್ಮಹತ್ಯೆಗೆ ನಿಖರವಾದ ಕಾರಣವೂ ತಿಳಿದಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Hubli News Latest Kannada News