ಹುಬ್ಬಳ್ಳಿ : ಹುಬ್ಬಳ್ಳಿ ಘಂಟೆಕೇರಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನ ಹಾಗೂ ಬಾಲ ಭವನ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಇಂದು ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನೆಡೆಸಿದರು.
ಸಮಾಜ ಕಲ್ಯಾಣ ಇಲಾಖೆಯ ಅನುದಾನ 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ಕಾಮಗಾರಿಗೆ ಈಗಾಗಲೆ1.50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು ಉಳಿದ ಮೊತ್ತವನ್ನು ಸಹ ಶೀಘ್ರವಾಗಿ ಪಾವತಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರೂ. 4.25 ಕೋಟಿ ವೆಚ್ಚದಲ್ಲಿ ಬಾಲಭವನ ನಿರ್ಮಿಸಲಾಗುತ್ತಿದೆ. ಎರೆಡು ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿದೆ. ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಉದ್ಘಾಟನೆಗೆ ಅನುವು ಮಾಡಿಕೊಡಬೇಕು. ಉತ್ತಮ ಗುಣಮಟ್ಟದ ಕಾಮಗಾರಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪರುಷೋತ್ತಮ್.ಎನ್.ಆರ್, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು.