ಹುಬ್ಬಳ್ಳಿ : ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಜನತಾ ಪರಿವಾರದ ಸಾಕಷ್ಟು ಜನ ಈ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, 2008 ರಲ್ಲಿ ಹೊರಟ್ಟಿಯವರಿಗೆ ಯಡಿಯೂರಪ್ಪನವರು ಬಿಜೆಪಿಗೆ ಆಹ್ವಾನ ನೀಡಿದ್ದರು. ಆದ್ರೆ ಜೆಡಿಎಸ್ ಜತೆಗೆ ಒಳ್ಳೆಯ ಸಂಬಂಧ ಇರುವುದರಿಂದ ಅವಾಗ ಬರಲಿಲ್ಲ. ಆದ್ರೂ ಅವಾಗ ನಮ್ಮ ಜೊತೆಗೆ ಒಳ್ಳೆಯ ಸಂಬಂಧವನ್ನ ಇಟ್ಟುಕೊಂಡಿದ್ದರು. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿ ವಿಚಾರವಾಗಿ ಪಕ್ಷಭೇದ ಮರೆತು ನಮಗೆ ಬೆಂಬಲ ನೀಡಿದ್ದರು.
ಹೊರಟ್ಟಿಯವರು ತಮ್ಮದೆ ಆದ ಅಭಿಮಾನಿಗಳನ್ನ ಹೊಂದಿದ್ದಾರೆ. ಈಗ ನಮ್ಮ ಪಕ್ಷಕ್ಕೆ ಬಂದಿದ್ದರಿಂದ ನಮಗೆ ಶಕ್ತಿ ಬಂದಿದೆ ಎಂದರು.
Hubli News Latest Kannada News