Home / Top News / ತಂಗಿ ಚುಡಾಯಿಸಿದ ಯುವಕನಿಗೆ ಚಾಕುವಿನಿಂದ ಇರಿದ ಅಣ್ಣ ತಮ್ಮ

ತಂಗಿ ಚುಡಾಯಿಸಿದ ಯುವಕನಿಗೆ ಚಾಕುವಿನಿಂದ ಇರಿದ ಅಣ್ಣ ತಮ್ಮ

Spread the love

ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ. ತಂಗಿಯನ್ನ ಚುಡಾಯಿಸಿದ ಎಂಬ ಕಾರಣಕ್ಕೆ ಅಣ್ಣಂದಿರಿಬ್ಬರು ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿ ಠ ಧಾರವಾಡ ಕಾಲೋನಿಯಲ್ಲಿ ನಡೆದಿದೆ.

ಚಂದ್ರಶೇಖರ್ ಎಂಬಾತನೇ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಯುವತಿಯೊಬ್ಬಳಿಗೆ ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಸಿಟ್ಟಾದ ಯುವತಿ ಸಹೋದರರಾದ ಕಿರಣ್ ಹಾಗೂ ಅಭಿ ಎನ್ನುವರು ಚಾಕು ಇರಿದಿದ್ದಾರೆ.

ತೀವ್ರ ಗಾಯವಾಗಿರುವ ಚಂದ್ರುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]