ಹುಬ್ಬಳ್ಳಿ: ಎ.ಸಿ.ಸಿ.ಪಿ.ಎಲ್ ಟ್ರೈನಿಂಗ್ ಡಿಜಿಜನ್ ಬೆಂಗಳೂರು ಹಾಗೂ ಲಕ್ಷ ಫೌಂಡೇಶನ್ ಹುಬ್ಬಳ್ಳಿ ಸಹಯೋಗದಲ್ಲಿ ನಿರುದ್ಯೋಗ ಯುವಕ-ಯುವತಿಯರಿಗಾಗಿ ಜೂನ್ 29 ರಂದು ಬೃಹತ್ ಉದ್ಯೋಗ ಮೇಳವನ್ನು ವಿದ್ಯಾನಗರದ ಮರಾಠಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಮಹೇಶ ಭಟ್ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬೃಹತ್ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ 20 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿ ಪಡೆದುಕೊಂಡ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು. ಸುಮಾರು 2000 ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಇನ್ನೂ ಉದ್ಯೋಗ ಮೇಳವನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉದ್ಘಾಟನೆ ಮಾಡಲಿದ್ದು, ಅತಿಥಿಗಳಾಗಿ ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ, ಪಾಲಿಕೆ ಮೇಯರ್ ಈರೇಶ ಅಂಚಟಗೇರಿ, ಜಿಲ್ಲಾ ಸ್ಕೀಲ್ ಡೆವಲಪ್ಮೆಂಟ್ ಆಫೀಸರ್ ಡಾ.ಚಂದ್ರಪ್ಪ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಗೋಪಾಲ ಲಮಾಣಿ ಸೇರಿದಂತೆ ಮುಂತಾದ ಗಣ್ಯಮಾನ್ಯರು ಪಾಲ್ಗೊಳಲಿದ್ದರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಘು ಕೋಳಿ, ತಿಲಕ್ ಶಿವಶಂಕರ, ಪ್ರಕಾಶ ಸೇರಿದಂತೆ ಮುಂತಾದವರು ಇದ್ದರು.