Home / Top News / ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೇ ಶೆಟ್ಟರ್ ಮನೆ ಮುಂದೆ ಪ್ರತಿಭಟನೆ : ಮುತಾಲಿಕ್

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೇ ಶೆಟ್ಟರ್ ಮನೆ ಮುಂದೆ ಪ್ರತಿಭಟನೆ : ಮುತಾಲಿಕ್

Spread the love

ಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮನೆ ಮುಂದೆ ಇದೇ ದಿ. ೨೬ ರಂದು ಪ್ರತಿಭಟನೆ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ನಗರದ ದುರ್ಗದಬೈಲ್ ನಲ್ಲಿ ಸಹಿ ಸಂಗ್ರಹ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಿಂದೂ ಪರ ಸಂಘಟನೆಗಳಿಂದ ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗಡುವು ನೀಡಿದರೂ ಸಹಿತ ಸರ್ಕಾರ ಹಾಗೂ ಹು-ಧಾ ಮಹಾನಗರ ಪಾಲಿಕೆ ಮೀನಾಮೇಷ ಎಣಿಸುತ್ತಿದೆ.

ಈದ್ಗಾ ಮೈದಾನ ಯಾರ ಸ್ವತ್ತಲ್ಲ. ಅದು ಸಾರ್ವಜನಿಕ ಸ್ವತ್ತು. ಅಲ್ಲಿ ಮುಸ್ಲಿಂ ಪ್ರಾರ್ಥನೆಗೆ ಅವಕಾಶ ನೀಡುತ್ತಾರೆ. ಆದರೇ ಗಣೇಶೋತ್ಸವ ಆಚರಣೆಗೆ ಏಕೆ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅನುಮತಿ ನೀಡಿದರೂ ಸರಿ. ನೀಡದಿದ್ದರೂ ಸರಿ ನಾವು ಸಾವಿರಾರು ಕಾರ್ಯಕರ್ತರ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಠಾಪನೆ ಮಾಡುತ್ತೇವೆ. ಅದೇನ್ ಮಾಡತೀರೋ ನಾವು ನೋಡತಿವಿ ಎಂದು ಮುತಾಲಿಕ್ ಕಿಡಿ ಕಾರಿದರು.

ಈ ಗಡವು ಮೀರಿದರೂ ಸಹಿತ ನಾವು ಗಣೇಶೋತ್ಸವ ಆಚರಣೆಯನ್ನು ಈದ್ಗಾ ಮೈದಾನದಲ್ಲಿ ಆಚರಣೆ ಮಾಡೇ ಮಾಡುತ್ತೇವೆ ಎಂದು ಮುತಾಲಿಕ್ ಹೇಳಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]