ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ
ಹುಬ್ಬಳ್ಳಿ : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ವಿವಿಧ ಹಿಂದೂ ಪರ ಸಂಘಟನೆಗಳಿಂದ ಹು-ಧಾ ಮಹಾನಗರ ಪಾಲಿಕೆ ಆವರಣದಲ್ಲಿಂದು ಪ್ರತಿಭಟನೆ ನಡೆಸಿದರು.
ರಾಣಿಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಶ್ರೀರಾಮ ಸೇನೆ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳಿಂದ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಹಾಗೂ ಮಹಾನಗರ ಪಾಲಿಕೆಗೆ ಆಗ್ರಹಿಸಿ ಕಾರ್ಯಕರ್ತರು ಪಟ್ಟು ಹಿಡಿದು ಕುಳಿತ್ತಿದ್ದಾರೆ.
ಈ ಸಂದರ್ಭದಲ್ಲಿ ಹನುಂಮತಸಾ ನಿರಂಜನ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಉಪಸ್ಥಿತರಿದ್ದರು.