ಹುಬ್ಬಳ್ಳಿ : ಮಾಂಸದಂಗಡಿಯಲ್ಲಿಯೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ
ಹುಬ್ಬಳ್ಳಿಯ ಬಾಣತಿಕಟ್ಟೆಯ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ಮು
ಸವದತ್ತಿ ತಾಲ್ಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಯ ಮನೆಗೆ ಬಂದಿದ್ದ. ಆದ್ರೆ ಸಂಬಂಧಿಯ ಮಟನ್ ಶಾಪ್ ನಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ.
ಹೊಟ್ಟೆಗೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಸಾವನ್ನಪಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆದ್ರೆ ಮೃತ ಅಸ್ಪಾಕ್ ಅವರ ಮಗನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ
ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.