ಧಾರವಾಡ : ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಖಂಡಿಸಿ ಹಾಗೂ ಅತ್ಯಾಚಾರ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಯ ಕರ್ನಾಟಕ ಜನಪರ ವೇದಿಕೆ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಬೇಕು ಇನ್ನೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿಗಳನ್ನು ರಚಿಸಿ ಸೂಕ್ತ ಭದ್ರತೆ ನೀಡಬೇಕು ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ನಡೆಯುವುದನ್ನು ತಡೆಯಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಉಪಾಧ್ಯಕ್ಷ ಮುತ್ತು ಬೆಳ್ಳಕ್ಕಿ, ಜಿಲ್ಲಾಧ್ಯಕ್ಷ ಶಿವು ಕಂಬಾರ, ತುಕಾರಾಂ ಮೋಹಿತೆ, ಈರಣ್ಣ ಬಡಿಗೇರ, ನಾಶೀರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.