ಹುಬ್ಬಳ್ಳಿ: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಹಸ್ತಶಿಲ್ಪಿ ವತಿಯಿಂದ ಸಿಲ್ಕ್ ಇಂಡಿಯಾ-2021 ಪ್ರದರ್ಶನ ಆರಂಭಗೊಂಡಿದೆ. ದೇಶದ ನಾನಾ ರಾಜ್ಯಗಳ ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಇಲ್ಲಿ ನಡೆಯುತ್ತಿದೆ.
ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 50ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಪ್ರದರ್ಶಿಸುತ್ತಿವೆ. ಇಂದು ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಈ ಮೇಳಕ್ಕೆ ಚಾಲನೆ ನೀಡಿದರು.
ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಅರಿಣಿ ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರಂ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕೋಲ್ಕತ್ತಾ ಗಣಪತಿ ಸೀರೆಗಳು, ಢಾಕಾ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್‌ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೇಟಿರಿಯಲ್ಸ್‌ಗಳು ಮತ್ತು ಸೀರೆಗಳು, ಬಾಗಲ್‌ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡಾರ್‌ಉಳ್ಳ ಮುಲ್‌ಬಾರಿ ಸಿಲ್ಕ್, ಕೋಲ್ಕತ್ತಾ ರೇಷ್ಮೆ ಸೀರೆಗಳು, ಬನಾರಸ್ ಮತ್ತು ಜಮ್‌ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ.
ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್‌ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್‌ಗಳು ಮತ್ತು ಬೆಡ್‌ಶೀಟ್‌ಗಳನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡುವರು. ಈ ವಸ್ತುಗಳನ್ನು ಉತ್ಪಾದಕರೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ವಸ್ತುಗಳು ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ.
ದೀಪಾವಳಿ ಹಬ್ಬವನ್ನು ಗಮನದಲ್ಲಿಟ್ಟುಕೊಂಡು ಸಿಲ್ಕ್ ಇಂಡಿಯಾ-2021 ಮೇಳ ಅ.31 ರವರೆಗೆ 11 ದಿವಸಗಳ ಕಾಲ ಪ್ರತಿ ದಿನ ಬೆಳಗ್ಗೆ 10.30 ರಿಂದ ರಾತ್ರಿ 8.30 ರವರೆಗೆ ಪ್ರದರ್ಶನ ಇರಲಿದೆ. ಉದ್ಘಾಟನೆ ಸಂದರ್ಭದಲ್ಲಿ ಹಸ್ತ ಶಿಲ್ಪಿ ವ್ಯವಸ್ಥಾಪಕ ನಿರ್ದೇಶಕ ಟಿ.ಅಭಿನಂದ್, ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ಚೇರ್ಮನ್ ಸವಿತಾ ಅಮರಶೆಟ್ಟಿ ಇದ್ದರು.