ಹುಬ್ಬಳ್ಳಿ : ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದೇನೆ. ಈ ಬಗ್ಗೆ ಸಮಗ್ರವಾದ ತನಿಖೆ ಆಗಬೇಕು.
ಕೆಲವರನ್ನು ರಕ್ಷಿಸುವ ಕೆಲಸ ಆಗಿತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ನಗರದಲ್ಲಿಂದು ಕಾಂಗ್ರೆಸ್ ನಾಯಕನ ಪುತ್ರನ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು,
ಯಾರನ್ನೋ ರಕ್ಷಿಸುವ ಕೆಲಸ ಆಗಬಾರದು. ಮುಖ್ಯಮಂತ್ರಿ ಗಳು “ಇಡಿ”ಗೆ ರೇಫರ್ ಮಾಡಿದ್ದಾಗಿ ಹೇಳುತ್ತಿದ್ದಾರೆ.
ಆಗಿದ್ದರೆ ಇಷ್ಟು ದಿನ ಯಾಕೆ ಮುಚ್ಚಿಟ್ಟಿದ್ದರು.?
ಇಷ್ಟು ದೊಡ್ಡ ಪ್ರಕರಣವನ್ನು ಮುಚ್ಚಿಟ್ಟಂತೆ ಆಯ್ತಾಲ್ಲ..?
ಕೇಂದ್ರ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದರು.
ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಯಾರು ಅಭಿವೃದ್ದಿ ಮಾಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಕ್ಷೇತ್ರದಲ್ಲಿದ್ದಾಗಲೇ ಬನ್ನಿ ಅಂತಾ ಹೇಳಿದ್ದೆ. ಇವರು ಯಾವ ಅಭಿವೃದ್ಧಿ ಮಾಡಿದ್ದಾರೆ?
ಹಾನಗಲ್, ಬಂಕಾಪುರ ಶಿರ್ಶಿ ರಸ್ತೆ ಮಾಡಿದ್ದು ನಾವು ಎಂದು ತಿರುಗೇಟು ನೀಡಿದರು.
ಡಿಕೆಶಿ ಆಪ್ತ ಧಾರವಾಡ ಯುಬಿ ಶೆಟ್ಟಿ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು
ನನಗೆ ಅದರ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.